Song: Mungaru maleye, Movie: Mungaru male

ಹಾಡು: ಮುಂಗಾರು ಮಳೆಯೇ
ರಚನೆ: ಯೋಗರಾಜ್‌ ಭಟ್‌
ಸಂಗೀತ: ಮನೋಮೂರ್ತಿ
ಗಾಯನ: ಸೋನು ನಿಗಂ
ಚಲನಚಿತ್ರ: ಮುಂಗಾರು ಮಳೆ

ಮುಂಗಾರು ಮಳೆಯೇ,
ಏನು ನಿನ್ನ ಹನಿಗಳ ಲೀಲೆ
ನಿನ್ನ ಮುಗಿಲ ಸಾಲೇ
ಧರೆಯ ಕೊರಳ ಪ್ರೇಮದ ಮಾಲೆ
ಸುರಿವ ಒಲುಮೆಯ ಜಡಿಮಳೆಗೆ
ಪ್ರೀತಿ ಮೂಡಿದೆ

ಯಾವ ಚಿಪ್ಪಿನಲ್ಲಿ, ಯಾವ ಹನಿಯು ಮುತ್ತಾಗುವುದೋ
ಒಲವು ಎಲ್ಲಿ ಕುಡಿಯೊಡೆಯುವುದೋ, ತಿಳಿಯದಾಗಿದೆ

ಮುಂಗಾರು ಮಳೆಯೇ,
ಏನು ನಿನ್ನ ಹನಿಗಳ ಲೀಲೆ

ಭುವಿ ಕೆನ್ನೆ ತುಂಬ 
ಮುಗಿಲು ಸುರಿದ ಮುತ್ತಿನ ಗುರುತು
ನನ್ನ ಎದೆಯ ತುಂಬ
ಅವಳು ಬಂದ ಹೆಜ್ಜೆಯ ಗುರುತು
ಹೆಜ್ಜೆ ಗೆಜ್ಜೆಯ ಸವಿಸದ್ದು, ಪ್ರೇಮನಾದವೋ

ಎದೆ ಮುಗಿಲಿನಲ್ಲಿ, ರಂಗು ಚೆಲ್ಲಿ ನಿಂತಳು ಅವಳು
ಬರೆದು ಹೆಸರ ಕಾಮನಬಿಲ್ಲು, ಏನು ಮೋಡಿಯೋ

ಮುಂಗಾರು ಮಳೆಯೇ,
ಏನು ನಿನ್ನ ಹನಿಗಳ ಲೀಲೆ

ಯಾವ ಹನಿಗಳಿಂದ, ಯಾವ ನೆಲವು ಹಸಿರಾಗುವುದೋ
ಯಾರ ಸ್ಪರ್ಶದಿಂದ, ಯಾರ ಮನವು ಹಸಿಯಾಗುವುದೋ
ಯಾರ ಉಸಿರಲ್ಯಾರ ಹೆಸರೋ, ಯಾರು ಬರೆದರೋ

ಯಾವ ಪ್ರೀತಿ ಹೂವು, ಯಾರ ಹೃದಯದಲ್ಲರಳುವುದೋ
ಯಾರ ಪ್ರೇಮ ಪೂಜೆಗೆ ಮುಡಿಪೋ, ಯಾರು ಬಲ್ಲರೋ

ಮುಂಗಾರು ಮಳೆಯೇ,
ಏನು ನಿನ್ನ ಹನಿಗಳ ಲೀಲೆ

ಒಲವ ಚಂದಮಾಮ, ನಗುತ ಬಂದ ಮನದಂಗಳಕೆ
ಪ್ರೀತಿ ಬೆಳಕಿನಲ್ಲಿ, ಹೃದಯ ಹೊರಟಿದೆ ಮೆರವಣಿಗೆ,
ಅವಳ ಪ್ರೇಮದೂರಿನ ಕಡೆಗೆ, ಪ್ರೀತಿ ಪಯಣವೋ

ಪ್ರಣಯದೂರಿನಲ್ಲಿ, ಕಳೆದು ಹೋಗೊ ಸುಖವ ಇಂದು
ಧನ್ಯನಾದೆ ಪಡೆದುಕೊಂಡು, ಹೊಸ ಜನ್ಮವೋ

ಮುಂಗಾರು ಮಳೆಯೇ,
ಏನು ನಿನ್ನ ಹನಿಗಳ ಲೀಲೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Song: Sada ninna kannali (ಸದಾ ನಿನ್ನ ಕಣ್ಣಲಿ), Movie: Bachchan (ಬಚ್ಚನ್-2013)

Song: Ninninda dooragi iralarenu (ನಿನ್ನಿಂದ ದೂರಾಗಿ ಇರಲಾರೆನು), Movie: Siddartha (ಸಿದ್ದಾರ್ಥ)

Song: Preethi neenillade naanu hegirali (ಪ್ರೀತಿ ನೀನಿಲ್ಲದೆ ನಾನು ಹೇಗಿರಲಿ), Movie: Bhaava baamaida (ಭಾವ ಬಾಮೈದ)

Song: Elliruve (ಎಲ್ಲಿರುವೆ), Movie: Bayaludaari (ಬಯಲುದಾರಿ)

Song: Maathu muride(ಮಾತು ಮುರಿದೆ‌), Movie: Ganda hendathi (ಗಂಡ-ಹೆಂಡತಿ)

Song: Onde ondu Aaseyu (ಒಂದೇ ಒಂದು ಆಸೆಯು), Seetharamu (ಸೀತಾರಾಮು)

Song: Kangalu vandane helide (ಕಂಗಳು ವಂದನೆ ಹೇಳಿದೆ), Movie: Mugiyada kathe (‌ಮುಗುಯದ ಕಥೆ)

Song: Jaaji mallige node (ಜಾಜಿ ಮಲ್ಲಿಗೆ ನೋಡೆ), Movie: Sevanthi sevanthi (ಸೇವಂತಿ ಸೇವಂತಿ)

Song: Prema chandrama (ಪ್ರೇಮ ಚಂದ್ರಮ), Movie: Yajamana (ಯಜಮಾನ)