Song: Haadonda haaduve (ಹಾಡೊಂದ ಹಾಡುವೆ), Movie: Naandi (ನಾಂದಿ)

ಹಾಡು: ಹಾಡೊಂದ ಹಾಡುವೆ
ರಚನೆ: ಆರ್‌.ಎನ್.‌ ಜಯಗೋಪಾಲ್
ಸಂಗೀತ: ವಿಜಯ ಭಾಸ್ಕರ್
ಗಾಯನ: ಪಿ.ಬಿ.ಶ್ರೀನಿವಾಸ್
ಚಲನಚಿತ್ರ: ನಾಂದಿ

ಹಾಡೊಂದ ಹಾಡುವೆ, ನೀ ಕೇಳು ಮಗುವೇ

ಹಾಡೊಂದ ಹಾಡುವೆ, ನೀ ಕೇಳು ಮಗುವೇ
ಬರಿದಾದ ಮನೆ ಬೆಳಗೆ ನೀನೆಂದು ಬರುವೆ

ಹಾಡೊಂದ ಹಾಡುವೆ, ನೀ ಕೇಳು ಮಗುವೇ

ಸೀಮಂತದಾನಂದ ನಾ ನೀಡಲಿಲ್ಲ
ನಿನಗಾಗಿ ಮಹಿಳೆಯರು ತಾ ಹಾಡಲಿಲ್ಲ{೨}

ಸಿರಿವಂತರ ಭೋಗ ನಿನಗಿಲ್ಲಿ ಇಲ್ಲ
ಸಿರಿಯಾಗಿ ನಿಧಿಯಾಗಿ ನೀ ಬರುವೆಯಲ್ಲ

ಹಾಡೊಂದ ಹಾಡುವೆ ನೀ ಕೇಳು ಮಗುವೇ

ನಿನ್ನೊಂದು ನುಡಿಮುತ್ತು ಸವಿಜೇನಿನಂತೆ
ಆ ಸುಖದೆ ನಾ ಮರೆವೆ ಈ ಬಾಳ ಚಿಂತೆ{೨}

ಅದ ಕೇಳೊ ಸೌಭಾಗ್ಯ ಈ ತಾಯಿಗಿಲ್ಲ(೨)
ಇವಳಾಸೆ ಆಕಾಂಕ್ಷೆ ನೀನಾದೆಯಲ್ಲ

ಹಾಡೊಂದ ಹಾಡುವೆ ನೀ ಕೇಳು ಮಗುವೇ
ಬರಿದಾದ ಮನೆ ಬೆಳಗೆ ನೀನೆಂದು ಬರುವೆ

ಹಾಡೊಂದ ಹಾಡುವೆ, ನೀ ಕೇಳು ಮಗುವೇ



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

Song: Sada ninna kannali (ಸದಾ ನಿನ್ನ ಕಣ್ಣಲಿ), Movie: Bachchan (ಬಚ್ಚನ್-2013)

Song: Ninninda dooragi iralarenu (ನಿನ್ನಿಂದ ದೂರಾಗಿ ಇರಲಾರೆನು), Movie: Siddartha (ಸಿದ್ದಾರ್ಥ)

Song: Preethi neenillade naanu hegirali (ಪ್ರೀತಿ ನೀನಿಲ್ಲದೆ ನಾನು ಹೇಗಿರಲಿ), Movie: Bhaava baamaida (ಭಾವ ಬಾಮೈದ)

Song: Elliruve (ಎಲ್ಲಿರುವೆ), Movie: Bayaludaari (ಬಯಲುದಾರಿ)

Song: Maathu muride(ಮಾತು ಮುರಿದೆ‌), Movie: Ganda hendathi (ಗಂಡ-ಹೆಂಡತಿ)

Song: Onde ondu Aaseyu (ಒಂದೇ ಒಂದು ಆಸೆಯು), Seetharamu (ಸೀತಾರಾಮು)

Song: Kangalu vandane helide (ಕಂಗಳು ವಂದನೆ ಹೇಳಿದೆ), Movie: Mugiyada kathe (‌ಮುಗುಯದ ಕಥೆ)

Song: Jaaji mallige node (ಜಾಜಿ ಮಲ್ಲಿಗೆ ನೋಡೆ), Movie: Sevanthi sevanthi (ಸೇವಂತಿ ಸೇವಂತಿ)

Song: Prema chandrama (ಪ್ರೇಮ ಚಂದ್ರಮ), Movie: Yajamana (ಯಜಮಾನ)